ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 9.5 ಕೋಟಿ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ವಿದೇಶದಿಂದ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದ ನಾಲ್ವರ ಬ್ಯಾಗ್ ತಪಾಸಣೆ ನಡೆಸಿದಾಗ 9.5 ಕೋಟಿ ಚಿನ್ನ ಪತ್ತೆಯಾಗಿದೆ. ಆರೋಪಿಗಳು ಕೌಲಾಲಂಪುರದಿಂದ ಪೇಸ್ಟ್ ರೂಪದಲ್ಲಿ ಚಿನ್ನ ಸಾಗಿಸುತ್ತಿದ್ದರು.
ಸದ್ಯ, ನಾಲ್ವರನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.