ಬೆಂಗಳೂರು : ಕಾಲಮಿತಿಯೊಳಗೆ ಪರಿಹಾರ ಒದಗಿಸುವ ಮೂಲಕ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾತನಾಡಿದರು.ಸಾವಿರಾರು ಸಂಖ್ಯೆಯಲ್ಲಿ ಜನರು ತಮ್ಮ ಅಹವಾಲುಗಳನ್ನು ಹೊತ್ತು ಜನಸ್ಪಂದನಕ್ಕೆ ಆಗಮಿಸಿದ್ದಾರೆ. ಇಂದು ಇಡೀ ದಿನ ಇವರೆಲ್ಲರ ಸಮಸ್ಯೆಗಳಿಗೆ ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯೊಳಗೆ ಪರಿಹಾರ ಒದಗಿಸುವ ಮೂಲಕ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
ಕಳೆದ ಬಾರಿಯ ಜನಸ್ಪಂದನದ ಅಭೂತಪೂರ್ವ ಯಶಸ್ಸು ಈ ಬಾರಿ ನಿರೀಕ್ಷೆಗೂ ಮೀರಿದಷ್ಟು ಜನರನ್ನು ಕರೆತಂದಿದೆ. ಎಲ್ಲರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುತ್ತೇವೆ, ಆಗಮಿಸಿರುವ ಬಂಧುಗಳು ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೆ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.