ಬೆಂಗಳೂರು : ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿದ್ದಾರೆ.
ಸಿಎಂ ಜನತಾ ದರ್ಶನಕ್ಕೆ ಹೋಗಲು ಆಗಿದಿದ್ರೆ ನೀವು ಈ ನಂಬರ್ ಗೆ ಕರೆ ಮಾಡಿ ದೂರು ನೀಡಬಹುದು. ನೀವು ಕುಳಿತಲ್ಲಿಯೇ ದೂರು ದಾಖಲು ಮಾಡಬಹುದು.
ರಾಜ್ಯ ಸರ್ಕಾರ 1902 ಸಹಾಯವಾಣಿಯನ್ನು ತೆರೆದಿದ್ದು,ಜನತಾ ದರ್ಶನಕ್ಕೆ ದೂರದ ಊರಿನಿಂದ ಹೋಗಲು ಆಗದವರು, ತೀವ್ರ ಸಮಸ್ಯೆ ಎದುರಿಸುತ್ತಿರುವವರು ಯಾರಾದರೂ ಇದ್ದರೆ 1902 ಸಹಾಯವಾಣಿಗೆ ಕರೆ ಮಾಡಬಹುದು. ಅಧಿಕಾರಿಗಳುನಿಮ್ಮ ಸಮಸ್ಯೆಗಳನ್ನು, ಅಹವಾಲುಗಳನ್ನು ಆಧರಿಸಿ ಅದನ್ನು ಜನತಾ ದರ್ಶನ ಕೆಟಗರಿ ಅಡಿ ದೂರು ದಾಖಲು ಮಾಡಿಕೊಳ್ಳಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆವರೆಗೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಎರಡನೇ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್ಗಳನ್ನು ಮಾಡಲಾಗಿದೆ. ಇದಕ್ಕಾಗಿ 36 ಕೌಂಟರ್ ಗಳನ್ನು ಓಪನ್ ಮಾಡಲಾಗಿದೆ. ಜನಸ್ಪಂದನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ.