ಬೆಂಗಳೂರು : ಕಾರ್ಕಳ ತಾಲೂಕಿನ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಅವ್ಯವಹಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಕಾರ್ಕಳ ತಾಲ್ಲೂಕಿನ ಬೈಲೂರಿನ ಎರ್ಲಪಾಡಿ ಗ್ರಾಮದ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಕೋರಿ ಸಿಎಂ ಸಿದ್ದರಾಮಯ್ಯಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಅದೇಶ ಹೊರಡಿಸಿದೆ.