ಬೆಂಗಳೂರು : ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ವಿರೋಧಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮಸಿ ಬಳಿದ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ನಿರ್ಮಲಾ ಸೀತಾರಾಮನ್ ಕಚೇರಿಯ ನಾಮಫಲಕಕ್ಕೆ ಮಸಿ ಬಳಿಯಲಾಗಿದೆ.
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಕಾಂಗ್ರೆಸ್ ನಿನ್ನೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದು, ಇಂದು NSUIನ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬೆಂಗಳೂರಿನ ಕಚೇರಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು. ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಸೇರಿ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ರೂ ಪ್ರಧಾನಿಗಳ ಬಳಿ ರಾಜ್ಯದ ಬಿಜೆಪಿ ಸಂಸದರು ಮಾತನಾಡದೇ ಮೌನವಾಗಿದ್ದಾರೆ ಎಂದು ಕಾರ್ಯಕರ್ತರು ಬಿಜೆಪಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.