ಬೆಂಗಳೂರು : ಬೆಂಗಳೂರಿನಲ್ಲಿ ಸಿಎಂ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದ್ದು, ಸಮಸ್ಯೆ ಹೇಳಿಕೊಂಡು ಬಂದ ವಿಶೇಷ ಚೇತನ ವ್ಯಕ್ತಿಗೆ ಸ್ಥಳದಲ್ಲೇ ಸಿದ್ದರಾಮಯ್ಯ ಪರಿಹಾರ ನೀಡಿದ್ದಾರೆ.
ವಿಶೇಷ ಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್ ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಇಂದು ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದರು. ಅರ್ಜಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಆದಷ್ಟು ಶೀಘ್ರ ನೆರವು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಮಾನವೀಯ ನೆರವನ್ನು ಖಾತ್ರಿಪಡಿಸಿದರು.
ಬೆಂಗಳೂರಿನ ಜೆ.ಜೆ ನಗರ ನಿವಾಸಿ ಎಂ.ಶ್ರೀಧರ್ ಅವರ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಒದಗಿಸುವಂತೆ ಇಂದು ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿ ಮನವಿ ಸಲ್ಲಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀಧರ್ ಅವರ ಸಮಸ್ಯೆಗೆ ಸ್ಪಂದಿಸಿ, ಸಾಧ್ಯವಾದಷ್ಟು ಶೀಘ್ರ ಪರಿಹಾರ ಒದಗಿಸುವ ಭರವಸೆ ನೀಡಿದರು.