ಬೆಂಗಳೂರು : ವಿಧಾನಸೌಧದ ಮುಂಭಾಗ ರಾಜ್ಯ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತಿದ್ದು, ಪುಟ್ಟ ಬಾಲಕನ ಚಿಕಿತ್ಸೆಗೆ ಸ್ಥಳದಲ್ಲೇ ಸಿದ್ದರಾಮಯ್ಯ ನೆರವು ನೀಡುವ ಕ್ರಮ ಕೈಗೊಂಡಿದ್ದಾರೆ.
ತುಮಕೂರಿನ ಮಾಡಕಶಿರಾ ಗ್ರಾಮದ ಶಾಂತಿಬಾಯಿ ಅವರ ಬುದ್ಧಿಮಾಂದ್ಯ ಮಗುವಿಗೆ ಚಿಕಿತ್ಸೆ ಮಾಡಿಸಲು ನೆರವು ಕೋರಿ ಮುಖ್ಯ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದ್ದರು.
ಮಗುವಿನ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಮರುಗಿದ ಮುಖ್ಯಮಂತ್ರಿಗಳು ನೆರವು ನೀಡುವ ಅಭಯ ನೀಡಿದರು.ಆಡಳಿತ ಜನರ ಬಳಿಗೆ ಹೋಗಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖುದ್ದಾಗಿ ಅಹವಾಲುಗಳನ್ನು ಆಲಿಸಿ ಪರಿಹಾರ ಒದಗಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ.