HomeKarnatakaBIG NEWS : 'ಸಿಎಂ ಜನಸ್ಪಂದನ' ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ : ಇದುವರೆಗೆ ಒಟ್ಟು 10,174...

BIG NEWS : ‘ಸಿಎಂ ಜನಸ್ಪಂದನ’ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ : ಇದುವರೆಗೆ ಒಟ್ಟು 10,174 ಅರ್ಜಿ ಸಲ್ಲಿಕೆ

ಬೆಂಗಳೂರು : ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ ಒಟ್ಟು 10,174 ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 11 ಗಂಟೆಯಿಂದ ಜನಸ್ಪಂದನ ಕಾರ್ಯಕ್ರಮ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೂ ನಡೆಯಲಿದೆ. ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ತಮ್ಮ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.

ಇದು ಆಳುವ ಸರ್ಕಾರವಲ್ಲ ಆಲಿಸುವ ಸರ್ಕಾರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ‘ಜನಸ್ಪಂದನ’ ಕಾರ್ಯಕ್ರಮಕ್ಕೆ ನಾಡಿನ ನಾನಾ ಭಾಗಗಳಿಂದ ಆಗಮಿಸಿದ್ದ ಜನರ ಕುಂದುಕೊರತೆಗಳನ್ನು ಆಲಿಸಲಾಯಿತು.ಕಳೆದ ಬಿಜೆಪಿ ಸರ್ಕಾರ ಜನರಿಗೆ ಪರಿಹಾರವಿರಲಿ, ಜನರನ್ನು ಹತ್ತಿರಕ್ಕೂ ಬರಲು ಬಿಡುತ್ತಿರಲಿಲ್ಲ. ಬರಿ ಭ್ರಷ್ಟಾಚಾರದಲ್ಲಿಯೇ ಮುಳುಗಿದ್ದರು.ಇದೀಗ ಕೇಂದ್ರ ಸರ್ಕಾರವು ನಮ್ಮ ತೆರಿಗೆ ಪಾಲು ನೀಡದೆ ಕನ್ನಡಿಗರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆದರೆ ನಮ್ಮ ಸರ್ಕಾರ ನಾಡಿನ ಜನರನ್ನು ಎಂದಿಗೂ ಕೈಬಿಡುವುದಿಲ್ಲ. ಜನರ ಕುಂದುಕೊರತೆಗಳನ್ನು ನೀಗಿಸಲೆಂದೇ ಈ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿದೆ. ಇದರಿಂದ ಸಾವಿರಾರು ಜನರಿಗೆ ಕೆಲವೇ ಕ್ಷಣಗಳಲ್ಲಿ ಪರಿಹಾರ ದೊರೆಯಲಿದೆ.ಇದು ಆಳುವ ಸರ್ಕಾರವಲ್ಲ ಆಲಿಸುವ ಸರ್ಕಾರ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular