HomeKarnatakaCM Janaspandana : ಬೌದ್ಧ ಆಧ್ಯಾತ್ಮಿಕ ಗ್ರಂಥಾಲಯ ನವೀಕರಣಕ್ಕೆ 20 ಲಕ್ಷ ಅನುದಾನದ ನೆರವು ;...

CM Janaspandana : ಬೌದ್ಧ ಆಧ್ಯಾತ್ಮಿಕ ಗ್ರಂಥಾಲಯ ನವೀಕರಣಕ್ಕೆ 20 ಲಕ್ಷ ಅನುದಾನದ ನೆರವು ; ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಬೌದ್ಧ ಆಧ್ಯಾತ್ಮಿಕ ಗ್ರಂಥಾಲಯ ನವೀಕರಣಕ್ಕೆ 20 ಲಕ್ಷ ಅನುದಾನದ ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು ನಗರದ ಮಹಾಭೋದಿ ಸಂಶೋಧನಾ ಕೇಂದ್ರದ ಬೌದ್ಧ ಜನಾಂಗದ ಅಧ್ಯಾತ್ಮಿಕ ಗ್ರಂಥಾಲಯದ ನವೀಕರಣಕ್ಕಾಗಿ ₹ 2೦ ಲಕ್ಷ ಅನುದಾನ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

2024-25 ನೇ ಆಯವ್ಯಯದಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ₹ 1೦೦ ಕೋಟಿ ಅನುದಾನ ಹಾಗೂ ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ ರಚಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಡಳಿತ ಜನರ ಬಳಿಗೆ ಹೋಗಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖುದ್ದಾಗಿ ಅಹವಾಲುಗಳನ್ನು ಆಲಿಸಿ ಪರಿಹಾರ ಒದಗಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular