ಬೆಂಗಳೂರು : ಒಂದು ತಿಂಗಳೊಳಗೆ ಜನಸ್ಪಂದನಾ ಅರ್ಜಿ ಪರಿಹರಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಜನಸ್ಪಂದನಾ ಕಾರ್ಯಕ್ರಮದ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ ಶೇ. 98ರಷ್ಟಕ್ಕೆ ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ ಶೇ. 98ರಷ್ಟಕ್ಕೆ ಪರಿಹಾರ ಸಿಕ್ಕಿವೆ . ಈ ಬಾರಿಯೂ ಅಷ್ಟೇ ವೇಗವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಸ್ಥಳದಲ್ಲೇ ಪರಿಹಾರ
1) ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಬಂತಹಳ್ಳಿ ಗ್ರಾಮದ 50 ವರ್ಷದ ನಾರಾಯಣಸ್ವಾಮಿ ಅವರ ಖಾತೆ ಬದಲಾವಣೆ ಮಾಡಲಾಗಿದ್ದು, ಸರಿಪಡಿಸಿಕೊಡಿ ಎಂದು ಇಂದು ಜನಸ್ಪಂದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಪ್ರಕರಣದ ಕುರಿತು ಪರಿಶೀಲಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿ, ಸಂಕಷ್ಟದಲ್ಲಿರುವ ಜೀವಕ್ಕೆ ನೆರವಿನ ಭರವಸೆ ನೀಡಿದರು.
2) ರಾಯಚೂರಿನ ಮೂರು ವರ್ಷದ ಶುಶಾಂತ್ ಥಲೆಸ್ಸೆಮಿಯಾ ಕಾಯಿಲೆಗೆ ತುತ್ತಾಗಿದ್ದಾನೆ. ಈತನನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಕರೆತಂದ ತಾಯಿ ಲಲಿತಾ ಅವರು ಆರ್ಥಿಕ ಸಹಾಯವನ್ನು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.ಮುಖ್ಯಮಂತ್ರಿಗಳು ಅರ್ಜಿ ಸ್ವೀಕರಿಸಿ, ಸಿಎಂ ಪರಿಹಾರ ನಿಧಿಯಿಂದ ನೆರವು ಒದಗಿಸುವ ಭರವಸೆ ನೀಡಿದರು.
3) ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್ ಅವರು ಬೋನ್ ಮ್ಯಾರೋ ಸಮಸ್ಯೆಯಿಂದ ಬಳಲುತ್ತಿದ್ದು, ಬಡತನದಿಂದಾಗಿ ಚಿಕಿತ್ಸೆ ಪಡೆಯಲಾಗದೆ ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ವಿಚಾರವನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಂಡರು.ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಸನಗೌಡ ಬಿರಾದರ್ ಅವರ ಬೋನ್ ಮ್ಯಾರೋ ಕಸಿಗಾಗಿ 4 ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿ, ನೊಂದ ವ್ಯಕ್ತಿಯ ಬಾಳಿಗೆ ಬೆಳಕಾದರು.
4) ಆರೋಪಿ ವಿರುದ್ಧ ಸ್ಥಳದಲ್ಲೇ ಕ್ರಮವಹಿಸಲು ಸೂಚನೆ
ಬೆಳಗಾವಿ ಜಿಲ್ಲೆಯ ಸುರೇಶ್ ತುಕಾರಾಂ ಫೋಂಡೆ ತಮ್ಮ ಜಮೀನಿನಲ್ಲಿ ದೀಪಕ್ ಪಾಟೀಲ್ ಎಂಬುವರು ಮಣ್ಣು ತೆಗೆಯುತ್ತಿದ್ದು, ಕಳವು ಪ್ರಕರಣ ದಾಖಲಿಸಿಲ್ಲ ಎಂದು ದೂರಿದರು.ಸ್ಥಳದಲ್ಲಿಯೇ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪ್ರಕರಣ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ದಯಾನಂದ್ ಅವರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸ್ಥಳದಲ್ಲಿಯೇ ಮಾತನಾಡಿ ಕ್ರಮ ವಹಿಸಿಲು ಸೂಚಿಸಿದರು.
5) ಊರಿನ ದಾರಿ ಸರಿಪಡಿಸಲು ಕ್ರಮದ ಭರವಸೆ
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ನಾಗರಾಜಯ್ಯ ಅವರು ಶಿರಾಸಲ್ಲಿ ರೂಢಿದಾರಿಯನ್ನು ಕತ್ತರಿಸಿರುವುದರಿಂದ 5 ಕಿ.ಮೀ ಬಳಸಿಕೊಂಡು ಓಡಾಡಬೇಕಿದೆ. ಇದನ್ನು ಸರಿಪಡಿಸುವಂತೆ ಕೋರಿದರು.
ಅರ್ಜಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
6) ಕಣ್ಣು ಕಳೆದುಕೊಂಡಿರುವ ವ್ಯಕ್ತಿಗೆ ಸ್ವಾವಲಂಬಿ ಬದುಕಿಗೆ ನೆರವು
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಶರಣ ಬಸವ ಕುಮಾರ್ ಅವರಿಗೆ ಎರಡೂ ಕಣ್ಣುಗಳು ಕಾಣದಾಗಿದ್ದು ಸ್ವಂತ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಕೋರಿದರು.ಸಮಸ್ಯೆ ಆಲಿಸಿದ ಮುಖ್ಯ ಮಂತ್ರಿಗಳು ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ಅಭಯವನ್ನಿತ್ತರು.