HomeKarnatakaರಾಜ್ಯದ ʻSC-STʼ ವರ್ಗದ ಪದವೀಧರರಿಗೆ ಗುಡ್‌ ನ್ಯೂಸ್‌ : ಸ್ವಂತ ಉದ್ದಿಮೆ ಸ್ಥಾಪಿಸಲು ಸಿಗಲಿದೆ 5...

ರಾಜ್ಯದ ʻSC-STʼ ವರ್ಗದ ಪದವೀಧರರಿಗೆ ಗುಡ್‌ ನ್ಯೂಸ್‌ : ಸ್ವಂತ ಉದ್ದಿಮೆ ಸ್ಥಾಪಿಸಲು ಸಿಗಲಿದೆ 5 ಲಕ್ಷ ರೂ.ವರೆಗೆ ಸಹಾಯಧನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ/ವರ್ಗದ ಪದವೀಧರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪತ್ರಿಕೋದ್ಯಮದಲ್ಲಿ (Journalism) ಪರಿಶಿಷ್ಟ ಜಾತಿ/ವರ್ಗದ ಸ್ನಾತಕೋತ್ತರ ಪದವೀಧರರಿಗೆ ಎಲೆಕ್ಟ್ರಾನಿಕ್ ಹಾಗೂ Digital ಮಾದ್ಯಮದಲ್ಲಿ ಸ್ಥಾಪಿಸಲು ಸಹಾಯಧನ ನೀಡುವ ಕುರಿತು. ಉದ್ದಿಮೆಯನ್ನು ಸ್ಥಾಪಿಸಲು ಸಹಾಯಧನ ನೀಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ.

ದಿನಾಂಕ: 19-10-2023 ರಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ -ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ / ತಾಲ್ಲೂಕು ಮಟ್ಟದಲ್ಲಿ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಟ ರೂ. 5.00 ಲಕ್ಷಗಳ ಸಹಾಯಧನವನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿತ್ತು.

ಮೇಲೆ ಓದಲಾದ ಕ್ರಮಾಂಕ (2) -ರಲ್ಲಿ ದಿನಾಂಕ: 19-10-2023 ರ ಆದೇಶದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡುವಂತೆ ಮನವಿ ಸಲ್ಲಿಸಿರುತ್ತಾರೆ. ಮನವಿಯನ್ನು ಪರಿಶೀಲಿಸಿದ ಸರ್ಕಾರವು ದಿನಾಂಕ: 19-10-2023 ರ ಆದೇಶದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡಲು ತೀರ್ಮಾನಿಸಿ, ಸರ್ಕಾರವು ಈ ಕೆಳಗಿನಂತೆ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಟ ರೂ. 5.00 ಲಕ್ಷಗಳ ಸಹಾಯಧನವನ್ನು ನಿಗದಿಪಡಿಸಿ ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಕಇ 352 ಎಸ್‌ಡಿಸಿ 2022. ದಿನಾಂಕ:19-10-2023 ರಲ್ಲಿ ನಿಗಧಿಪಡಿಸಲಾದ ಷರತ್ತುಗಳನ್ನು ಮಾರ್ಪಡಿಸಿ, ಈ ಕಳಕಂಡಂತೆ ಪರಿಷ,ರಿಸಿ. ಆದೇಶಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular