![](https://kannadadunia.com/wp-content/uploads/2024/02/WhatsApp-Image-2024-02-08-at-7.34.08-PM.jpeg)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮ ಭರ್ಜರಿ ಯಶಸ್ವಿಯಾಗಿದ್ದು, ಒಂದೇ ದಿನ 12,372 ಅರ್ಜಿಗಳು ಸ್ವೀಕೃತಗೊಂಡಿದ್ದು, 20 ಸಾವಿರ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಂದು ತಿಂಗಳೊಳಗೆ ಹೆಚ್ಚು ಅರ್ಜಿ , ಅಹವಾಲು ಪರಿಗರಿಸಿ ಎಂದು ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.