HomeKarnatakaಗ್ರಾಮೀಣ ಭಾಗದ ನಿರುದ್ಯೋಗಿ ಯುವಕಯುವತಿಯರೇ ಗಮನಿಸಿ : ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ\ಯುವತಿಯರೇ ಗಮನಿಸಿ : ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಫೆಬ್ರವರಿ ತಿಂಗಳಲ್ಲಿ ಸೋಲಾರ್ ಟೆಕ್ನಿಷಿಯನ್, ಜೆಸಿಬಿ ಅಪ್ರೆಟರ್’’ ಉಚಿತ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಫೆಬ್ರವರಿ 12 ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿAಗ್ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನೇತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ, ದೂ.ಸಂ : 8217236973, 9483485489, 9482555316, ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular