BREAKING: ನಮೋ ಭಾರತ್ ಕಾರ್ಯಕ್ರಮದಲ್ಲಿ ಹೈಡ್ರಾಮಾ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಜಟಾಪಟಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಮೋ ಭಾರತ್ ಕಾರ್ಯಕ್ರಮದಲ್ಲಿ ಕಪ್ಪುಪಟ್ಟಿ ಪ್ರದರ್ಶನಕ್ಕೆ ಯತ್ನ ನಡೆದಿದೆ. ಚಕ್ರವರ್ತಿ ಸೂಲಿಬೆಲೆ ಅವರ ಕಾರ್ಯಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸುತ್ತಾ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ್ದಾರೆ. ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದಾರೆ. ಸೂಲಿಬೆಲೆ ವಿರುದ್ಧ ಬ್ಯಾನರ್ ಪ್ರದರ್ಶಿಸಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಕಾರ್ಯಕ್ರಮದ ವೇದಿಕೆಯಲ್ಲಿ ಚಕ್ರವರ್ತಿ ಸೂಲಿಬೆಲೆ, ಸಿ.ಟಿ. ರವಿ ಇದ್ದರು. ಸೂಲಿಬೆಲೆ ವಿರುದ್ಧ ಪೋಸ್ಟರ್ ಪ್ರದರ್ಶಿಸಿ ಘೋಷಣೆ ಕೂಗಿದ ಕೆಲವರು ಕಲ್ಲುತೂರಾಟ ನಡೆಸಿದ್ದಾರೆ. ಕಲ್ಲು ತೂರಿದ ಕಟ್ಟಡದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಪೊಲೀಸರು ಪ್ರತಿಭಟನೆ ನಡೆಸಿದವರನ್ನು ಕರೆದೊಯ್ದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read