alex Certify ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಬಿಜೆಪಿ ‘ಗ್ರಾಮ ಚಲೋ ಅಭಿಯಾನ’: 42,000 ಕಾರ್ಯಕರ್ತರು ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಬಿಜೆಪಿ ‘ಗ್ರಾಮ ಚಲೋ ಅಭಿಯಾನ’: 42,000 ಕಾರ್ಯಕರ್ತರು ಭಾಗಿ

ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಮೂರು ದಿನದ ಕಾರ್ಯಕ್ರಮದಲ್ಲಿ 42000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ 28,000 ಹಳ್ಳಿಗಳು, 19000 ನಗರ ಬೂತ್ ಗಳಲ್ಲಿ 42000 ಕಾರ್ಯಕರ್ತರು ಮೂರು ದಿನ ನಿರಂತರವಾಗಿ ಅಭಿಯಾನದಲ್ಲಿ ಭಾಗವಹಿಸುವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಅಭಿಯಾನದ ಮೂಲಕ ಪ್ರತಿ ಗ್ರಾಮ ಮನೆಗೆ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಲಿದ್ದಾರೆ ಎಂದರು.

ಈ ಅಭಿಯಾನ ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಗೋಡೆ ಬರಹ ಬರೆಯಲಾಗುವುದು. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಅಭಿವೃದ್ಧಿ ಕಾರ್ಯಕ್ರಮಗಳ ತಲುಪಿಸುವ ನಿಟ್ಟಿನಲ್ಲಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...