HomeKarnatakaಗ್ರಾಮಪಂಚಾಯತಿ ಸದಸ್ಯರ ಬೇಡಿಕೆಗಳ ಈಡೇರಿಕೆಗೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮಪಂಚಾಯತಿ ಸದಸ್ಯರ ಬೇಡಿಕೆಗಳ ಈಡೇರಿಕೆಗೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ನಿನ್ನೆ ಫ್ರೀಡಂಪಾರ್ಕ್ ನಲ್ಲಿ ನಡೆದ ಕರ್ನಾಟಕ ಗ್ರಾಮಪಂಚಾಯತಿ ಒಕ್ಕೂಟದ ಸದಸ್ಯರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರಿಂದ 28 ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಸ್ವೀಕರಿಸಿದ್ದಾರೆ.

ಗ್ರಾಮಪಂಚಾಯತಿ ಸದಸ್ಯರ ಬೇಡಿಕೆಗಳ ಕುರಿತು ಮುಂದಿನ ವಾರ ಒಕ್ಕೂಟದ ಮುಖಂಡರ ಸಭೆ ಕರೆದು ಚರ್ಚಿಸಿ ಅವರ ಬೇಡಿಕೆಗಳನ್ನು ವಿಸ್ತೃತವಾಗಿ ಆಲಿಸುವ ಹಾಗೂ ಅವರ ಬೇಡಿಕೆಗಳ ಕುರಿತು ಸರ್ಕಾರದ ಕೆಲಸಗಳ ಕುರಿತ ವರದಿಯನ್ನು ಕೂಡ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ.

ಸಂವಿಧಾನದ 73ನೇ ತಿದ್ದುಪಡಿಯ ಸಾರಾಂಶವನ್ನು ನಿಜರೂಪದಲ್ಲಿ ಜಾರಿ ಮಾಡಿ ಪಂಚಾಯತಿ ಮಟ್ಟದಲ್ಲಿ ಆಡಳಿತವನ್ನು ಬಲಪಡಿಸಲು, ಸ್ವರಾಜ್ಯವನ್ನು ಸ್ಥಾಪಿಸಲು ನಮ್ಮ ಇಲಾಖೆಯ ಪ್ರಯತ್ನವನ್ನು ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟ ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮೀಣ ಆಡಳಿತದಲ್ಲಿ ಸಮಗ್ರ ರೀತಿಯಲ್ಲಿ ಸುಧಾರಣೆ ತರಲು ಕಟಿಬದ್ಧರಾಗಿ ನಮ್ಮ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular