ರಾಯಚೂರು : ಪ್ರೀತಿಗೆ ಪೋಷಕರು ಒಪ್ಪಿಗೆ ಕೊಡಲಿಲ್ಲ ಎಂದು ಮನನೊಂದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಸಂಗೀತಾ (17) ಎಂದು ಗುರುತಿಸಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕಾರು ಚಾಲಕ ಕೃಷ್ಣನನ್ನು ಯುವತಿ ಪ್ರೀತಿಸಿ ಮನೆ ಬಿಟ್ಟು ಹೋಗಿದ್ದಳು. ಆದರೆ ಮನೆಯವರು ಬುದ್ದಿ ಹೇಳಿ ಮನೆಗೆ ಕರೆದುಕೊಂಡು ಬಂದಿದ್ದರು, ಇದರಿಂದ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣದಲ್ಲಿ ಆರೋಪಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.