ನವದೆಹಲಿ: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಈಗ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ. ನಾನು ತಪ್ಪು ಮಾಹಿತಿ ನೀಡಿದೆ, ಕೊಹ್ಲಿಯ ಗೈರಿಗೆ 2ನೇ ಮಗುವಿನ ನಿರೀಕ್ಷೆ ಕಾರಣವಲ್ಲ ಎಂದು ಎಬಿಡಿ ಉಲ್ಟಾ ಹೊಡೆದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ವಿರಾಟ್ ಕೊಹ್ಲಿ ಅನುಪಸ್ಥಿತಿಯ ಬಗ್ಗೆ ವದಂತಿಗಳನ್ನು ಹರಡುವ ಮೂಲಕ ತಾನು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ.
ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹಂಚಿಕೊಂಡ ಮಾಹಿತಿಯು ನಿಜವಲ್ಲ ಎಂದು ಬಹಿರಂಗಪಡಿಸಿದರು ಮತ್ತು ಪ್ರಸ್ತುತ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಯಾರಿಗೂ ತಿಳಿದಿಲ್ಲ ಎಂದು ಹೇಳಿದರು.
ಡಿವಿಲಿಯರ್ಸ್ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ನಲ್ಲಿದ್ದ ವೇಳೆ ಯಾರೋ ಒಬ್ಬರು ಕೊಹ್ಲಿ ಬಗ್ಗೆ ಕೇಳಿದ್ದಾರೆ. ಈ ವೇಳೆ ಡಿವಿಲಿಯರ್ಸ್ ವಿರಾಟ್ ಕೊಹ್ಲಿ ದಂಪತಿ ಈ ವರ್ಷ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದಿದ್ದರು.