ಬೆಂಗಳೂರು : ಡಿ.ಕೆ ಸುರೇಶ್ ಗೆ ಗುಂಡಿಕ್ಕಿ ಕೊಲ್ಲಿ ಎಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಡಿ ಕೆ ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಈಶ್ವರಪ್ಪ ಹೇಳುತ್ತಾರೆ, ಒಬ್ಬ ಸಂಸದರನ್ನು ಕೊಲ್ಲಿ ಎಂದು ಹೇಳುವುದು ಸರಿಯೇ..? ರಾಜಕೀಯ ಧುರೀಣರಾಗಿ ಇಂತಹ ಹೇಳಿಕೆ ನೀಡುತ್ತಾರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
ಈಶ್ವರಪ್ಪ ಅವರಿಗೆ ಹೊಡಿಬಡಿ ಎನ್ನುವುದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ, ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪ್ರತ್ಯೇಕ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ್ದ ಡಿಕೆ ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದರು. ಈಶ್ವರಪ್ಪ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.