ಚಿಕ್ಕಮಗಳೂರು : ಲವ್ ಜಿಹಾದ್ ಆರೋಪ ಮಾಡಿ ಡ್ಯಾನ್ಸ್ ಮಾಸ್ಟರ್ ಮೇಲೆ ಹಲ್ಲೆ ನಡೆಸಿದ 7 ಭಜರಂಗದಳದ ಕಾರ್ಯಕರ್ತರನ್ನು ಆಲ್ದೂರು ಪೊಲೀಸರು ಬಂಧಿಸಿದ್ದಾರೆ.
ಉಜಿರೆಯ ಖಾಸಗಿ ಕಾಲೇಜಿನ ಡ್ಯಾನ್ಸ್ ಮಾಸ್ಟರ್ ಆಗಿದ್ದ ಮುಸ್ಲಿಂ ಯುವಕ ರೂಮನ್ ಎಂಬಾತ ಅಪ್ರಾಪ್ತೆಯ ಜೊತೆ ಸುತ್ತಾಡುತ್ತಿದ್ದನು ಎನ್ನಲಾಗಿದೆ. ಈ ಫೋಟೋ, ವಿಡಿಯೋ ವೈರಲ್ ಆಗಿದ್ದಕ್ಕೆ ಭಜರಂಗದಳದ ಕಾರ್ಯಕರ್ತರು ಆತನ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಶಿವಕುಮಾರ್, ಸ್ವರೂಪ್ ಕಾರ್ತಿಕ್, ಮಧು, ಸೇರಿದಂತೆ 7 ಭಜರಂಗದಳದ ಕಾರ್ಯಕರ್ತರನ್ನು ಆಲ್ದೂರು ಪೊಲೀಸರು ಬಂಧಿಸಿದ್ದಾರೆ.
ಡ್ಯಾನ್ಸ್ ಮಾಸ್ಟರ್ ರೂಮನ್ ವಿರುದ್ಧ ಕೂಡ ಬಾಲಕಿಯ ಪೋಷಕರು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.