ಮಂಗಳೂರು : ಚಲಿಸುತ್ತಿದ್ದ ಬಸ್ ನಿಂದ ರಸ್ತೆಗೆ ಬಿದ್ದು ಮಹಿಳೆ ದುರ್ಮರಣಕ್ಕೀಡಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ಗೆ ಮಹಿಳೆಯೊಬ್ಬರು ಮಗು ಕರೆದುಕೊಂಡು ಬಸ್ ಹತ್ತಿದ್ದಾರೆ, ಹಾಗಾಗಿ ರಾಧಾ ಅವರಿಗೆ ಸೀಟು ಬಿಟ್ಟುಕೊಟ್ಟಿದ್ದಾರೆ. ನಂತರ ರಾಧಾ ಬಸ್ ನ ಡೋರ್ ಪಕ್ಕದಲ್ಲಿ ಸರಳು ಹಿಡಿದುಕೊಂಡು ನಿಂತಿದ್ದರು. ಈ ವೇಳೆ ಕೈ ಜಾರಿ ಬಸ್ ನಿಂದ ಹೊರಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟಿದ್ದಾಳೆ.