ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಅಭಿಷೇಕ್ ಅವರನ್ನು ಅಮಾನತು ಮಾಡಲಾಗಿದೆ.
ಗುತ್ತಿಗೆ ಆಧಾರಿತ ವೈದ್ಯ ಅಭಿಷೇಕ್ ಅವರನ್ನು ಸೇವೆಯಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ವಜಾಗೊಳಿಸಿದ್ದಾರೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಕೆಲಸದಿಂದ ವಜಾಗೊಳಿಸಲಾಗಿದೆ.
ಹೊಳಲ್ಕೆರೆ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯ ಅಭಿಷೇಕ್ ವೈದ್ಯೆಯನ್ನೇ ಮದುವೆಯಾಗುತ್ತಿದ್ದು, ಇವರು ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.