HomeKarnatakaಮೀನು ಹಿಡಿಯಲು ಹೋದಾಗಲೇ ದುರಂತ: ಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವು

ಮೀನು ಹಿಡಿಯಲು ಹೋದಾಗಲೇ ದುರಂತ: ಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವು

ಕಾರವಾರ: ಮಂಚಿಕೇರಿ ಸಮೀಪ ಬೇಡ್ತಿಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಬಳಿ ಘಟನೆ ನಡೆದಿದೆ.

ಹಳ್ಳಿಗದ್ದೆ ಗ್ರಾಮದ ಖಲಂದರ್ ಫಕೃಸಾಬ್, ಅವರ ಪುತ್ರ ತನ್ವೀರ್ ಸಾವನ್ನಪ್ಪಿದ್ದಾರೆ. ನಿನ್ನೆ ಬೇಡ್ತಿಹಳ್ಳದಲ್ಲಿ ತಂದೆ, ಮಗ ಮೀನು ಹಿಡಿಯಲು ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಅನುಮಾನ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಕುಟುಂಬದವರು ಹುಡುಕಾಟ ನಡೆಸಿದಾಗ ಹಳ್ಳದಲ್ಲಿ ಮೃತ ದೇಹಗಳು ಪತ್ತೆಯಾಗಿವೆ. ಘಟನೆ ಸ್ಥಳಕ್ಕೆ ಯಲ್ಲಾಪುರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಪೊಲೀಸರು ಹೊರಗೆ ತೆಗೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular