HomeKarnatakaBIG NEWS: ಲೋಕಸಭೆ ಚುನಾವಣೆಗೆ ಶಿವಮೊಗ್ಗದಿಂದ ಅಚ್ಚರಿ ಅಭ್ಯರ್ಥಿ: ಸಚಿವ ಮಧು ಬಂಗಾರಪ್ಪ ಮಾಹಿತಿ

BIG NEWS: ಲೋಕಸಭೆ ಚುನಾವಣೆಗೆ ಶಿವಮೊಗ್ಗದಿಂದ ಅಚ್ಚರಿ ಅಭ್ಯರ್ಥಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಡಿಯಾಗಿದ್ದು, ಈ ಬಾರಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಉಸ್ತುವಾರಿ ನೀಡಿದ್ದಾರೆ. ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಕ್ಷೇತ್ರದ ಉಸ್ತುವಾರಿ ಕೊಟ್ಟಿದ್ದಾರೆ. ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಜವಾಬ್ದಾರಿ ವಹಿಸಿದ್ದಾರೆ. ಉಡುಪಿ –ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಕ್ಷೇತ್ರದ ಜವಾಬ್ದಾರಿ ನೀಡಿದ್ದಾರೆ. ಮೂರೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಟ ಶಿವರಾಜ್ ಕುಮಾರ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಹೇಳಿದ್ದರು. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಿವಣ್ಣ ಹೇಳಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ರೆಡಿಯಾಗಿದ್ದಾರೆ. ಈ ಬಾರಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular