HomeKarnatakaಮಂಡ್ಯದಲ್ಲಿ ಬಿಜೆಪಿಗೆ ಮೊದಲ ಗೆಲುವು ತಂದುಕೊಡುತ್ತೇನೆ: ಟಿಕೆಟ್ ಗಾಗಿ ಪ್ರಧಾನಿಗೆ ಸಂಸದೆ ಸುಮಲತಾ ಮನವಿ

ಮಂಡ್ಯದಲ್ಲಿ ಬಿಜೆಪಿಗೆ ಮೊದಲ ಗೆಲುವು ತಂದುಕೊಡುತ್ತೇನೆ: ಟಿಕೆಟ್ ಗಾಗಿ ಪ್ರಧಾನಿಗೆ ಸಂಸದೆ ಸುಮಲತಾ ಮನವಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ.

ಈ ಹಿನ್ನಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡದಂತೆ ಮನವಿ ಮಾಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡದೆ ಬಿಜೆಪಿಯೇ ಉಳಿಸಿಕೊಳ್ಳಬೇಕು. ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಗೆ ಮಂಡ್ಯದಲ್ಲಿ ಮೊದಲ ಗೆಲುವು ತಂದುಕೊಡುತ್ತೇನೆ ಎಂದು ಪ್ರಧಾನಿ ಅವರನ್ನು ಭೇಟಿ ಉಮಾ ಮಾಡಿದ ಸಂಸದೆ ಸುಮಲತಾ ಅಂಬರೀಶ್ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಅವರು ಯಾವುದೇ ಕಾರಣಕ್ಕೂ ಜೆಡಿಎಸ್ ಗೆ ಮಂಡ್ಯ ಬಿಟ್ಟು ಕೊಡಬೇಡಿ. ಭವಿಷ್ಯದಲ್ಲಿ ಬಿಜೆಪಿ ಕ್ಷೇತ್ರದಲ್ಲಿ ಭದ್ರವಾಗಿ ನೆಲೆಯೂರುವ ಆಶಯಕ್ಕೆ ಧಕ್ಕೆಯಾಗುತ್ತದೆ. ಮಂಡ್ಯ ಜನರ ವಿಶ್ವಾಸ ಗಳಿಸಲು ಬಿಜೆಪಿಗೆ ಅವಕಾಶ ಬಂದಿದ್ದು, ಅದನ್ನು ಕಳೆದುಕೊಳ್ಳುವುದು ಬೇಡ ಎಂದು ಪ್ರಧಾನಿಯವರೆಗೆ ಹೇಳಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular