HomeEntertainmentಇಂದು ಬಿಡುಗಡೆಯಾಗಲಿದೆ 'ಪುರುಷೋತ್ತಮನ ಪ್ರಸಂಗ' ಚಿತ್ರದ ಮೊದಲ ಹಾಡು

ಇಂದು ಬಿಡುಗಡೆಯಾಗಲಿದೆ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ಮೊದಲ ಹಾಡು

ತುಳು ಚಿತ್ರರಂಗದ ಖ್ಯಾತ ನಿರ್ದೇಶಕ ದೇವದಾಸ್ ಕಾಪಿಕಾಡ್ ಆಕ್ಷನ್ ಕಟ್ ಹೇಳಿರುವ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ಮೊದಲ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದೆ.

”ಅಚ್ಚುಮೆಚ್ಚು ನಿನ್ನ ಕಂಡರೆ” ಎಂಬ ಈ ಮೆಲೋಡಿ ಹಾಡನ್ನು ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ. ಈ ಚಿತ್ರದಲ್ಲಿ ಅಜಯ್ ಪೃಥ್ವಿ ಮತ್ತು ರಿಷಿಕ ನಾಯಕ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಇತ್ತೀಚಿಗಷ್ಟೇ ರಿಲೀಸ್ ಆಗಿದ್ದ ಈ ಸಿನಿಮಾ ಟೀಸರ್ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿತ್ತು.

ಈ ಚಿತ್ರವನ್ನು ವಿ ರವಿಕುಮಾರ್ ಮತ್ತು ಶಾಮ್ ಶುದ್ದಿನ್ ನಿರ್ಮಾಣ ಮಾಡಿದ್ದು, ಅರ್ಜುನ್ ಕಾಪಿಕಾಡ್ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸುಜಿತ್ ನಾಯಕ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ನಕುಲ್ ಅಭ್ಯಂಕರ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular