ಬೆಂಗಳೂರು : ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಕೆ.ಎಸ್ ಈಶ್ವರಪ್ಪ ವಿರುದ್ದ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ. ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಇದೀಗ ಮತ್ತೊಂದು ದೂರು ದಾಖಲಾಗಿದೆ.