ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ಕೈ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಈಶ್ವರಪ್ಪ ವಿರುದ್ಧ ಎರಡು ದೂರು ದಾಖಲಿಸಲಾಗಿದ್ದು, ನೋಟಿಸ್ ಕೂಡ ನೀಡಲಾಗಿದೆ.
ಈ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಸಂಸದ ಡಿ.ಕೆ ಸುರೇಶ್ ಗೆ ಮೊದಲು ನೋಟಿಸ್ ಕೊಡಲಿ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ, ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ. ರಾಷ್ಟ್ರ ದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು. ಇಂತಹ ಕಾನೂನು ತರಲು ನಾನು ಪ್ರಧಾನಿ ಮೋದಿಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು.