ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕು ಎಂಬ ಹೇಳಿಕೆ ನೀಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಇದೇ ವೇಳೆ ಬೆಂಗಳೂರಿನ ಚಕ್ರವರ್ತಿ ಬಡಾವಣೆಯಲ್ಲಿನ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದ್ದಾರೆ. ಈಶ್ವರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದಿದ್ದಾರೆ.
ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.