HomeKarnatakaBIG NEWS: ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ಕೋರ್ಟ್ ತಡೆ

BIG NEWS: ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ಕೋರ್ಟ್ ತಡೆ

ಮಂಗಳೂರು: ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರು ನೋಟಿಸ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಹಾಗೂ ವೇಣೂರು ವಲಯ ಮುಖಂಡ ಯಶೋಧರ ಗಡಿಪಾರು ನೋಟೀಸ್ ಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಇಬ್ಬರನ್ನೂ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಉಪವಿಭಾಗೀಯ ದಂಡಾಧಿಕಾರಿ ನೋಟಿಸ್ ಜಾರಿ ಮಾಡಿದ್ದರು. ಇದನ್ನು ಪ್ರಶ್ನಿಸಿ ದಿನೇಶ್ ಪಂಜಿಗ ಹಾಗೂ ಯಶೋಧರ, ಪುತ್ತೂರು ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೋಟಿಸ್ ಜಾರಿ ಕ್ರಮ ಸರಿಯಿಲ್ಲ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದಾರೆ. ಅರ್ಜಿದಾರರ ಪರ ವಾದ ಪುರಸ್ಕರಿಸಿದ ಕೋರ್ಟ್ ಗಡಿಪಾರು ನೋಟಿಸ್ ಗೆ ತಡೆಯಾಜ್ಞೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular