ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಕೋರ್ಟ್ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಗೊಳಿಸಲಾಗಿದೆ.
ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಿಂದ ವಾರೆಂಟ್ ಜಾರಿ ಮಾಡಲಾಗಿದೆ. ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಮಾಡಲಾಗಿತ್ತು. ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕೇಸು ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪ ಕೊಟ್ಟಿ ದಾಖಲಿಸಿದ್ದರು.
ಸಮನ್ಸ್ ಜಾರಿಯಾದರೂ ಕೋರ್ಟ್ ಗೆ ಗೈರು ಹಾಜರಾದ ಹಿನ್ನಲೆಯಲ್ಲಿ ಎನ್.ಬಿ.ಡಬ್ಲ್ಯೂ. ಜಾರಿಗೆ 42ನೇ ಎಸಿಎಂಎಂ ನ್ಯಾ. ಜೆ. ಪ್ರೀತ್ ಆದೇಶಿಸಿದ್ದಾರೆ.