HomeKarnatakaBIG NEWS : ʻಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕʼ ಯೋಜನೆಯಡಿ ʻಮಂಗನಕಾಯಿಲೆʼಗೆ ಉಚಿತ ಚಿಕಿತ್ಸೆ :...

BIG NEWS : ʻಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕʼ ಯೋಜನೆಯಡಿ ʻಮಂಗನಕಾಯಿಲೆʼಗೆ ಉಚಿತ ಚಿಕಿತ್ಸೆ : ಸಚಿವ ದಿನೇಶ್ ಗುಂಡೂರಾವ್

‌ಬೆಂಗಳೂರು :  ಮಂಗನ ಕಾಯಿಲೆಗೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ  ಸಚಿವರು,  ಮಂಗನ ಕಾಯಿಲೆಗೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular