HomeKarnatakaBIG NEWS: ಅಮಿತ್ ಶಾ ಮೈಸೂರು ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆ

BIG NEWS: ಅಮಿತ್ ಶಾ ಮೈಸೂರು ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆ

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದು, ಅವರ ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆಯಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದಿನ ವೇಳಾಪಟ್ಟಿಯಂತೆ ಅಮಿತ್ ಶಾ ಅವರು ಬೆಳಿಗ್ಗೆ 11 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಬೇಕಿತ್ತು. ಬಳಿಕ ಸುತ್ತೂರು ಮಠಕ್ಕೆ ಭೇಟಿ ಕೊಡಬೇಕಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಮಾಹಿತಿ ನೀಡಿದ್ದು, ಬದಲಾದ ವೇಳಾ ಪಟ್ಟಿಯಂತೆ ಅಮಿತ್ ಶಾ ಅವರು ಮೊದಲು ಸುತ್ತೂರು ಮಠಕ್ಕೆ ಭೇಟಿ ಕೊಡಲಿದ್ದು, ಬಳಿಕ ಮಧ್ಯಾಹ್ನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular