HomeKarnatakaದೇವಶಿಲ್ಪಿ ಅರುಣ್ ಯೋಗಿರಾಜ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸನ್ಮಾನ

ದೇವಶಿಲ್ಪಿ ಅರುಣ್ ಯೋಗಿರಾಜ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸನ್ಮಾನ

ಮೈಸೂರು: ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಸನ್ನಿಧಿಯಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಮಿತ್ ಶಾ ಪಾಲ್ಗೊಂಡಿದ್ದು, ಗದ್ದುಗೆ ಪೂಜೆ ನೆರವೇರಿಸಿದ್ದಾರೆ.

ಈ ವೇಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿರುವ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸುತ್ತೂರು ಶ್ರೀಗಳು ಸನ್ಮಾನಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular