ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು ಅಪಾರ ಪ್ರಮಾಣದ ಅರಣ್ಯ ಸಂಪತ್ತು ಅಗ್ನಿಗಾಹುತಿಯಾಗಿದೆ.
ಚಂದ್ರದ್ರೋಣ ಪರ್ವತ ಸಾಲಿನ ಮುಳ್ಳಯ್ಯನ ಗಿರಿ ಬೆಟ್ಟದಲ್ಲಿ ಏಕಾಏಕಿ ಕಾಡ್ಗಿಚ್ಚು ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು, ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ನೋಡ ನೋಡುತ್ತಿದ್ದಂತೆ ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿವೆ.
ಬಿಸಿಲ ಝಳದಿಂದಾಗಿ ಬೆಂಕಿಯ ತೀವ್ರತೆ ಇನ್ನಷ್ಟು ಹೆಚ್ಚುತ್ತಿದ್ದು, ಕ್ಷಣ ಕ್ಷಣಕ್ಕೂ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತಲ ಅರಣ್ಯ ಪ್ರದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ.