ನವದೆಹಲಿ: ಹಿಮಾಚಲ ಪ್ರದೇಶದ ಚಂಬಾದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.4 ರಷ್ಟು ತೀವ್ರತೆ ದಾಖಲಾಗಿದೆ.
ಫೆಬ್ರವರಿ 11 ರಂದು ಭಾನುವಾರ ಸಂಜೆ 5.30 ಕ್ಕೆ ಚಂಬಾದಲ್ಲಿ ಭೂಕಂಪ ಸಂಭವಿಸಿದೆ. ಭಾರತದ ಹಿಮಾಚಲ ಪ್ರದೇಶದ ಚಂಬಾದಿಂದ 45 ಕಿಮೀ (28 ಮೈಲಿ) ದೂರದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ.