ಇಸ್ಲಾಮಾಬಾದ್ : ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಎರಡು ರಾಜಕೀಯ ಪ್ರತಿಸ್ಪರ್ಧಿ ಪಕ್ಷಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲರ್ಕಾನಾ ಜಿಲ್ಲೆಯಲ್ಲಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಮತ್ತು ಗ್ರ್ಯಾಂಡ್ ಡೆಮಾಕ್ರಟಿಕ್ ಅಲೈಯನ್ಸ್ (ಜಿಡಿಎ) ಕಾರ್ಯಕರ್ತರ ನಡುವೆ ಭಾನುವಾರ ಸಶಸ್ತ್ರ ಘರ್ಷಣೆ ನಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಎರಡೂ ಪಕ್ಷಗಳ ಕಾರ್ಯಕರ್ತರು ಮತ್ತು ಅವರ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸರು ಮೃತಪಟ್ಟಿದ್ದಾರೆ ಮತ್ತು ಗಾಯಗೊಂಡರು .
ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳೀಯ ಪೊಲೀಸರು ಸ್ಥಳಕ್ಕೆ ತಲುಪಿದ್ದು, ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ಅಧಿಕಾರಿ ಸೇರಿದಂತೆ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.