ಬೆಂಗಳೂರು: (ಫೆಬ್ರವರಿ 12) ಇಂದಿನಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಫೆ.16 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಫೆ. 12ರಿಂದ ಫೆಬ್ರವರಿ 23ರವರೆಗೆ ಅಧಿವೇಶನ ನಡೆಸಲು ಮತ್ತು ಫೆಬ್ರವರಿ 16ರಂದು ರಾಜ್ಯ ಬಜೆಟ್ ಮಂಡಿಸಲು ನಿರ್ಧರಿಸಲಾಗಿದೆ.
ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ಇಂದು ಫೆಬ್ರವರಿ 12 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಲೋಕಸಭೆ ಚುನಾವಣೆಗೆ ಮಾರ್ಚ್ನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲೇ ಬಜೆಟ್ ಮಂಡಿಸಲು ತೀರ್ಮಾನಿಸಿದ್ದರು.
ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ, ಬರ ಪರಿಹಾರ ಬಿಡುಗಡೆ ವಿಳಂಬ, ಕಾಮಗಾರಿಯಲ್ಲಿ ಶೇ.40ರಷ್ಟು ಕಮಿಷನ್ ಆರೋಪ, ರಾಜ್ಯದ ಹಣಕಾಸು ಸ್ಥಿತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸೋಮವಾರದಿಂದ ಆರಂಭವಾಗಲಿರುವ 10 ದಿನಗಳ ವಿಧಾನ ಮಂಡಲದ ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಸರ್ಕಾರ ಹಾಗೂ ಪ್ರತಿಪಕ್ಷದ ನಡುವೆ ಸದನದ ಹೊರಗೆ ಈಗಾಗಲೇ ಸಾಕಷ್ಟು ಆರೋಪ-ಪ್ರತ್ಯಾರೋಪ ನಡೆಯುತ್ತಿದ್ದು, ಅಧಿವೇಶನದಲ್ಲಿ ಭಾರಿ ವಾಗ್ವಾದಗಳು ನಡೆಯುವ ಲಕ್ಷಣವಿದೆ.