ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದ್ದು, ಫೆಬ್ರವರಿ 15 ನೇ ದಿನಾಂಕದಿಂದ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಪ್ರಾರಂಭಿಸಲಿದೆ ಎನ್ನಲಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು. ನಂತರ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್ಡೇಟ್ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುತ್ತದೆ ಎನ್ನಲಾಗಿದೆ.
ಗೃಹಲಕ್ಷ್ಮಿಯರಿಗೆ ಮಾಸಿಕ 2000 ರೂ ಹಣ ಪಡೆಯಲು ಹೊಸ ನಿಯಮ ರೂಪಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಹೌದು, ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.
ಗೃಹ ಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಪಡೆಯಲು NPCI ಕಡ್ಡಾಯವಾಗಿದೆ. NPCI ಆಗದಿದ್ದರೆ 6 ನೇ ಕಂತಿನ ಹಣ ಜಮಾ ಆಗಲ್ಲ. ನಿಮ್ಮ ಹತ್ತಿರದ ಬ್ಯಾಂಕ್ ಗೆ ಭೇಟಿ ನೀಡುವ ಮೂಲಕ NPCI ಮಾಡಬಹುದು. ಆಧಾರ್ ಕಾರ್ಡ್, ಪಡಿತರ ಚೀಟಿ ಜೊತೆಗೆ ಬ್ಯಾಂಕ್ ವಿವರಗಳನ್ನು ನೀಡಿದರೆ NPCI ಮಾಡಿಕೊಡಲಾಗುತ್ತದೆ.