ಗಾಝಾ : ಗಾಝಾ ಪಟ್ಟಿಯಲ್ಲಿ ಇಸ್ರೇಲಿ ದಾಳಿಯಿಂದ ಮೃತಪಟ್ಟವರ ಸಂಖ್ಯೆ 28,176ಕ್ಕೆ ಏರಿಕೆಯಾಗಿದ್ದು, 67,784 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾ ಮೂಲದ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 112 ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ ಮತ್ತು 173 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ.
ದಕ್ಷಿಣ ಗಾಝಾ ಪಟ್ಟಿಯ ನಗರ ರಾಫಾದಲ್ಲಿನ ಮನೆಯೊಂದರ ಮೇಲೆ ಇಸ್ರೇಲ್ ನಡೆಸಿದ ಬಾಂಬ್ ದಾಳಿಯಲ್ಲಿ ಕನಿಷ್ಠ 25 ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಕಳೆದ ಕೆಲವು ಗಂಟೆಗಳಲ್ಲಿ ಖಾನ್ ಯೂನಿಸ್, ದೇರ್ ಅಲ್-ಬಾಲಾಹ್, ರಫಾ ಮತ್ತು ಗಾಜಾ ನಗರದ ಮೇಲೆ ಇಸ್ರೇಲ್ ಹಿಂಸಾತ್ಮಕ ವೈಮಾನಿಕ ದಾಳಿ ಮತ್ತು ಫಿರಂಗಿ ಬಾಂಬ್ ದಾಳಿಗಳನ್ನು ನಡೆಸಿದ್ದು, ಡಜನ್ ಗಟ್ಟಲೇ ಫೆಲೆಸ್ತೀನೀಯರನ್ನು ಕೊಂದು ಗಾಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.