ಬೆಂಗಳೂರು : ಪ್ರತಿ ತಿಂಗಳ 2 ಮತ್ತು 4 ನೇ ಶನಿವಾರ ಕಬ್ಬನ್ ಪಾರ್ಕ್ನ ಒಳಗೆ ವಾಹನ ಸಂಚಾರಕ್ಕೆ ಅನುವು ನೀಡಿ ತೋಟಗಾರಿಕಾ ಇಲಾಖೆ ಆದೇಶ ಹೊರಡಿಸಿದೆ.
ರಜಾ ದಿನಗಳಲ್ಲಿ ನಿರ್ಬಂಧಿಸಲಾಗಿದ್ದ ಕಬ್ಬನ್ ಪಾರ್ಕ್ ಒಳಗಿನ ರಸ್ತೆಗಳಲ್ಲಿ ವಾಹನಗಳ ಸಂಚಾರ ಮತ್ತೆ ಆರಂಭವಾಗಿದೆ. ಮೊದಲ ಹಂತವಾಗಿ ಎರಡು ತಿಂಗಳು ಪ್ರಾಯೋಗಿಕವಾಗಿ ರಜಾ ದಿನಗಳಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.
ಹಲವು ವರ್ಷಗಳಿಂದ ಕಬ್ಬನ್ ಪಾರ್ಕ್ನೊಳಗೆ ಪ್ರತಿ ಎರಡು ಮತ್ತು ನಾಲ್ಕನೇ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜಾದಿನಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಈಗ ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ವಾಹನಗಳ ಸಂಚಾರಕ್ಕೆ ಮತ್ತೆ ಅವಕಾಶ ನೀಡಲಾಗುತ್ತಿದೆ. ಭಾನುವಾರ ಹಾಗೂ ಸಾರ್ವಜನಿಕ ರಜಾ ದಿನಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಈಗ ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ವಾಹನಗಳ ಸಂಚಾರಕ್ಕೆ ಮತ್ತೆ ಅವಕಾಶ ನೀಡಲಾಗುತ್ತಿದೆ.
ರಜಾ ದಿನಗಳು ಹಾಗೂ ಪ್ರತಿ ತಿಂಗಳ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರಗಳಂದು ಕಬ್ಬನ್ ಪಾರ್ಕ್ ಒಳಗಿನ ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು. ಇದರಿಂದ ರಜಾ ದಿನಗಳಲ್ಲಿ ವಾಣಿಜ್ಯ ವಲಯ (ಸಿಬಿಡಿ) ಪ್ರದೇಶದಲ್ಲಿ ವಾಹನ ದಟ್ಟಣೆ ಉಂಟಾಗುತ್ತಿತ್ತು, ಆದ್ದರಿಂದ ವಾಹನ ಸಂಚಾರಕ್ಕೆ ಮತ್ತೆ ಅವಕಾಶ ನೀಡುವಂತೆ ಸಂಚಾರ ವಿಭಾಗದ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರ ಕಬ್ಬನ್ ಪಾರ್ಕ್ ಒಳಗಿನ ರಸ್ತೆಗಳಲ್ಲಿ ವಾಹನ ನಿರ್ಬಂಧ ತೆರವುಗೊಳಿಸಿತ್ತು.