HomeKarnatakaSHOCKING: ಭೀಕರ ಬರಗಾಲದಿಂದ ಅಂತರ್ಜಲ ಕುಸಿತ: ಬತ್ತಿದ ಬೋರ್ ವೆಲ್ ಗಳು: ಬೆಳೆ ಉಳಿಸಿಕೊಳ್ಳಲು ಹರಸಾಹಸ

SHOCKING: ಭೀಕರ ಬರಗಾಲದಿಂದ ಅಂತರ್ಜಲ ಕುಸಿತ: ಬತ್ತಿದ ಬೋರ್ ವೆಲ್ ಗಳು: ಬೆಳೆ ಉಳಿಸಿಕೊಳ್ಳಲು ಹರಸಾಹಸ

ಬೆಂಗಳೂರು: ಮಳೆ ಕೊರತೆ ಪರಿಣಾಮ ರಾಜ್ಯದಲ್ಲಿ ಅಂತರ್ಜಲ ಗಣನೀಯ ಪ್ರಮಾಣದಲ್ಲಿ ಕುಸಿತವಾಗಿದೆ. ಇದರಿಂದಾಗಿ ಬೋರ್ವೆಲ್ ಗಳು ಬರಿದಾಗಿವೆ. 200ಕ್ಕೂ ಅಧಿಕ ತಾಲ್ಲೂಕುಗಳಲ್ಲಿ ಸಾವಿರಾರು ಕೊಳವೆ ಬಾವಿಗಳು ಬತ್ತಿದ್ದು, ಕುಡಿಯುವ ನೀರು, ಬೆಳೆ ಉಳಿಸಿಕೊಳ್ಳಲು ಪರದಾಟ ನಡೆಸುವಂತಾಗಿದೆ.

ಪ್ರಸಕ್ತ ವರ್ಷದಲ್ಲಿ ರಾಜ್ಯದಲ್ಲಿ ಶೇಕಡ 18 ರಷ್ಟು ಮುಂಗಾರು, ಶೇ. 36ರಷ್ಟು ಹಿಂಗಾರು ಮಳೆ ಕೊರತೆಯಾಗಿದೆ. ಅವಧಿಗೂ ಮೊದಲೇ ಹಳ್ಳ, ಕೊಳ್ಳ, ನದಿ, ಕೆರೆಕಟ್ಟೆಗಳು ಬತ್ತಿ ಹೋಗಿದ್ದು, ಅಂತರ್ಜಲ ಮಟ್ಟ ಕುಸಿತ ಕಂಡಿರುವುದರಿಂದ ಬೋರ್ವೆಲ್ ಗಳಲ್ಲಿಯೂ ನೀರು ಬತ್ತಿ ಹೋಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಳವೆ ಬಾವಿಗಳಲ್ಲಿ ನಿರಂತರವಾಗಿ ನೀರು ಬರುತ್ತಿಲ್ಲ. ಮತ್ತೆ ಕೆಲವು ಕೊಳವೆ ಬಾವಿಗಳು ಸಂಪೂರ್ಣ ಬತ್ತಿ ಹೋಗಿವೆ. 700-800 ಅಡಿವರೆಗೂ ಬೋರ್ವೆಲ್ ಕೊರೆಸಿದರೂ ನೀರು ಸಿಗುತ್ತಿಲ್ಲ. ಬೇಸಿಗೆಯಲ್ಲಿ ಜನಜಾನುವಾರುಗಳಿಗೆ ಕೃಷಿ ಚಟುವಟಿಕೆಗಳಿಗೆ ನೀರಿನ ಸಮಸ್ಯೆ ಎದುರಾಗಿದ್ದು, ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಹರಸಾಹಸ ನಡೆಸುವಂತಾಗಿದೆ. ಮುಂದಿನ ದಿನಗಳಲ್ಲಿ ಬಿಸಿಲಿನ ತಾಪ ಇನ್ನಷ್ಟು ಹೆಚ್ಚಳವಾಗಲಿದ್ದು, ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular