HomeIndiaBREAKING : ಪ್ರತಿಭಟನೆ ನಡೆಸಲು ದೆಹಲಿಗೆ ಹೊರಟಿದ್ದ ಕರ್ನಾಟಕದ ರೈತರು ಪೊಲೀಸ್ ವಶಕ್ಕೆ |Dilli Chalo

BREAKING : ಪ್ರತಿಭಟನೆ ನಡೆಸಲು ದೆಹಲಿಗೆ ಹೊರಟಿದ್ದ ಕರ್ನಾಟಕದ ರೈತರು ಪೊಲೀಸ್ ವಶಕ್ಕೆ |Dilli Chalo

ನವದೆಹಲಿ : ಪ್ರತಿಭಟನೆ ನಡೆಸಲು ದೆಹಲಿಗೆ ಹೊರಟಿದ್ದ ಕರ್ನಾಟಕದ ರೈತರನ್ನು ಮಧ್ಯಪ್ರದೇಶದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ರೈತರನ್ನು ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುರುಬೂರು ಶಾಂತಕುಮಾರ್  ನೇತೃತ್ವದಲ್ಲಿ ಹೊರಟ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಫೆಬ್ರವರಿ 13 ರಂದು ನಾಳೆ ದೆಹಲಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಲಿದ್ದು, ನಿಗದಿಯಾಗಿರುವ ರೈತರ ಮೆರವಣಿಗೆಯ ನಿರೀಕ್ಷೆಯಲ್ಲಿ, ದೆಹಲಿ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈಶಾನ್ಯ ದೆಹಲಿ ಮತ್ತು ಉತ್ತರ ಪ್ರದೇಶದ ಗಡಿಗಳಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 144 ಅನ್ನು ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular