ರಾಯಚೂರು : ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕಿ ಕರೆಮ್ಮ ಜಿ. ನಾಯಕ್ ಅವರ ಪುತ್ರ ಸಂತೋಷ್ ಮತ್ತು ಆತನ ಗ್ಯಾಂಗ್ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಸಂತೋಷ್ ವಿರುದ್ಧ ದೇವದುರ್ಗ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕರೆಮ್ಮ ಜಿ. ನಾಯಕ ಅವರ ಪುತ್ರ ಸಂತೋಷ್ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾಗಿ ದೂರು ದಾಖಲಾಗಿದೆ.
ಹನುಮಂತ ಹಲ್ಲೆಗೊಳಗಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್. ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ವಾಹನ ತಡೆದಿದ್ದಕ್ಕೆ ಪೇದೆಯನ್ನು ಸರ್ಕಾರಿ ಅತಿಥಿ ಗೃಹದಲ್ಲಿ ಹಾಕಿ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಶಾಸಕಿಯ ಪುತ್ರನ ದರ್ಪಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ, ಹಲ್ಲೆಗೊಳಗಾದ ಹನುಮಂತ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.