HomeKarnatakaಮನೆಯಲ್ಲಿ ನೇಣಿಗೆ ಶರಣಾದ ಪತ್ನಿ; ಪತಿ ಅರೆಸ್ಟ್

ಮನೆಯಲ್ಲಿ ನೇಣಿಗೆ ಶರಣಾದ ಪತ್ನಿ; ಪತಿ ಅರೆಸ್ಟ್

ಬೆಂಗಳೂರು: ಮಹಿಳೆಯೊಬ್ಬರು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದ ಮೋಹನ್ ಥಿಯೆಟರ್ ಬಳಿ ನಡೆದಿದೆ.

22 ವರ್ಷದ ಕಾವ್ಯಾ ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ತುಮಕೂರಿನ ಕುಣಿಗಲ್ ತಾಲೂಕಿನ ಕಾವ್ಯಾ ಎರಡು ವರ್ಷಗಳ ಹಿಂದೆ ಪ್ರವೀಣ್ ಎಂಬಾತನನ್ನು ವಿವಾಹವಾಗಿದ್ದರು. ದಂಪತಿಗೆ ಒಂದು ಮಗುವಿದೆ.

ಇದೀಗ ಕಾವ್ಯಾ ಏಕಾಏಕಿ ನೇಣಿಗೆ ಕೊರಳಿಡ್ಡಿದ್ದು, ಅನುಮಾನಕ್ಕೆ ಕಾರಣವಾಗಿದೆ. ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾವ್ಯಾ ಪತಿ ಹಾಗೂ ಆತನ ಪೋಷಕರನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular