ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದೆ. ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸಿದ್ದಾರೆ.
ಇಂದಿನಿಂದ ಫೆ.23ವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂಡ್ ಗೆಹ್ಲೋಟ್, ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ಪಂಚ ಯೋಜನೆಗಳಿಂದ ಜನರ ಬದುಕು ಬೆಳಕಾಗಿದೆ. ಸರ್ಕಾರದಿಂದ ಶಿಕ್ಷಣ ಕ್ಷೇತ್ರದಲ್ಲಿಯೂ ದೊಡ್ಡ ಬದಲಾವಣೆಯಾಗಲಿದೆ. ಕರ್ನಾಟಕ ಸರ್ಕಾರ ಹೊಸ ಶೈಕ್ಷಣಿಕ ನೀತಿ ರೂಪಿಸಲಿದೆ ಎಂದು ತಿಳಿಸಿದರು.