ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು ಇವರ ವತಿಯಿಂದ ಫೆ.26 ಹಾಗೂ 27 ರಂದು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.
ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.
ಉದ್ಯೋಗಾಕಾಂಕ್ಷಿಗಳು https://skillconnect.kaushalkar.com/
ಲಿಂಕ್ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ಉದ್ಯೋಗ ಮೇಳ ನಡೆಯಲಿದ್ದು, 500 ಕ್ಕಿಂತ ಹೆಚ್ಚಿನ ಸಂಸ್ಥೆಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಲಿದೆ.
ಅರ್ಜಿ ಸಲ್ಲಿಸೋದು ಹೇಗೆ..?
1) ಅಧಿಕೃತ ವೆಬ್ಸೈಟ್ https://skillconnect.kaushalkar.com/ ಭೇಟಿ ನೀಡಿ.
2) ರಿಜಿಸ್ಟರ್ ಆಪ್ಷನ್ ಕ್ಲಿಕ್ ಮಾಡಿ
3) ನಂತರ ಉದ್ಯೋಗ ಮೇಳ ಎಂಬ ಆಯ್ಕೆ ಗೆ ಹೋಗಿ
4) ಉದ್ಯೋಗದಾತ ನೋಂದಣಿ ಎಂಬ ಆಪ್ಷನ್ ಕ್ಲಿಕ್ ಮಾಡಿ
5) ಅರ್ಜಿ ನಮೂನೆ ಓಪನ್ ಆಗುತ್ತದೆ. ನಿಮ್ಮ ಮಾಹಿತಿಗಳನ್ನು ತುಂಬಿ ಅರ್ಜಿ ಸಲ್ಲಿಸಿ.
ಉದ್ಯೋಗ ಮೇಳಕ್ಕೆ ತೆರಳುವಾಗ ನಿಮ್ಮ ಪಾಸ್ಪೋರ್ಟ್ ಸೈಜ್ ಫೋಟೋ , ನಿಮ್ಮ Resume, ಅಂಕಪಟ್ಟಿ, ಗುರುತಿನ ಚೀಟಿ ಕೊಂಡೊಯ್ಯುವುದನ್ನು ಮರೆಯಬೇಡಿ.

