HomeKarnatakaSC, ST ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ‘ಸರಳ ವಿವಾಹ ‘ಯೋಜನೆಯಡಿ ಸಿಗಲಿದೆ 50,000...

SC, ST ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ‘ಸರಳ ವಿವಾಹ ‘ಯೋಜನೆಯಡಿ ಸಿಗಲಿದೆ 50,000 ಆರ್ಥಿಕ ನೆರವು !

ಬೆಂಗಳೂರು : ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾದ ಪರಿಶಿಷ್ಟ ಜಾತಿ,ಪಂಗಡಕ್ಕೆ ಸೇರಿದ ದಂಪತಿಗೆ ‘ಸರಳ ವಿವಾಹ ಯೋಜನೆ’ ಅಡಿಯಲ್ಲಿ ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.

ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ರೂ. 50,000 ಆರ್ಥಿಕ ನೆರವು ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

2015-16ನೇ ಸಾಲಿನ ಆಯವ್ಯಯ ಭಾಷಣದಲ್ಲಿ, ‘ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳ ವಿವಾಹ ಮಾಡಿಕೊಂಡ ಪ.ಜಾತಿ,ಪಂಗಡದ ದಂಪತಿಗೆ ಸರಳ ವಿವಾಹ ಯೋಜನೆಯಡಿ ಜೀವನೋಪಾಯಕ್ಕಾಗಿ ಸುಮಾರು 50 ಸಾವಿರ ರೂ. ಆರ್ಥಿಕ ನೆರವು ಒದಗಿಸಲಾಗುವುದು,’ ಎಂದು ಸರಕಾರ ಘೋಷಣೆ ಮಾಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular