ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ನಾಗಸಂದ್ರ ನಿವಾಸಿ ರಾಜೇಂದ್ರ ಎಂಬುವವರು ಬಸ್ ನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದಿದೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಂದ್ರ (45) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಕೆಎಸ್ಆರ್ ಟಿಸಿ ಬಸ್ ವಶಕ್ಕೆ ಪಡೆದುಕೊಂಡು ಚಾಲಕನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

