HomeKarnatakaವಿಧಾನಸಭೆಯಲ್ಲಿ ಬಿಜೆಪಿಯಿಂದ 'ಜೈ ಶ್ರೀರಾಮ್', ಕಾಂಗ್ರೆಸ್ ನಿಂದ 'ಜೈ ಭೀಮ್' ಘೋಷಣೆ ; ಜೆಡಿಎಸ್ ತಟಸ್ಥ

ವಿಧಾನಸಭೆಯಲ್ಲಿ ಬಿಜೆಪಿಯಿಂದ ‘ಜೈ ಶ್ರೀರಾಮ್’, ಕಾಂಗ್ರೆಸ್ ನಿಂದ ‘ಜೈ ಭೀಮ್’ ಘೋಷಣೆ ; ಜೆಡಿಎಸ್ ತಟಸ್ಥ

ಬೆಂಗಳೂರು : ವಿಧಾನಸಭೆ ಅಧಿವೇಶನದಲ್ಲಿ ಇಂದು ಬಿಜೆಪಿ ಜೈಶ್ರೀರಾಮ್ ಘೋಷಣೆ ಕೂಗಿದರೆ ಕಾಂಗ್ರೆಸ್ ನಿಂದ ಜೈ ಭೀಮ್ ಘೋಷಣೆ ಕೂಗಿದೆ.

ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರು ಸದನದಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಜೈ ಭೀಮ್ ಘೋಷಣೆ ಕೂಗಿದ್ದಾರೆ. ಆದರೆ ಯಾವುದೇ ಘೋಷಣೆ ಕೂಗದೇ ಬಿಜೆಪಿ ತಟಸ್ಥವಾಗಿತ್ತು. ಬಿಜೆಪಿ ಸದಸ್ಯರ ಜೈಶ್ರೀರಾಂ ಘೋಷಣೆಗೆ ಪ್ರತಿಕ್ರಿಯೆಯಾಗಿ ಸಚಿವ ಬೈರತಿ ಸುರೇಶ್ ಅವರು ಜೈ ಸಂವಿಧಾನ ಎಂದು ಘೋಷಣೆ ಕೂಗಿದರೆ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಜೈ ಭೀಮ್ , ಜೈ ಬಸವಣ್ಣ ಘೋಷಣೆ ಕೂಗಿದರು. ಜೆಡಿಎಸ್ ಸದಸ್ಯರು ಯಾವುದೇ ಘೋಷಣೆ ಕೂಗದೆ ತಟಸ್ಥವಾಗಿ ಉಳಿದರು.

ರಾಜ್ಯಪಾಲರ ಭಾಷಣದ ಮೂಲಕ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗಿದ್ದು, ಸದನಕ್ಕೆ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರು ಗಮನ ಸೆಳೆದಿದ್ದಾರೆ.ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದೆ. ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ. ಇಂದಿನಿಂದ ಫೆ.23ವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂಡ್ ಗೆಹ್ಲೋಟ್, ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular